ಉಡುಪಿ, (ಜುಲೈ 14): ಜಿಲ್ಲೆಯ ಸಮಾಜ ಸೇವಕ, ಆಪತ್ಭಾಂದವ ಎಂದೇ ಖ್ಯಾತಿ ಪಡೆದುಕೊಂಡಿರುವ ಆಸೀಫ್ನ ನೀಚ ಕೃತ್ಯ ಬಟಾಬಯಲಾಗಿದೆ. ಸ್ವಂತ ಪುತ್ರಿಯ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಹೌದು.. ಪಡುಬಿದ್ರಿಯಲ್ಲಿ ತನ್ನ ಸ್ವಂತ ಪುತ್ರಿಯ ಖಾಸಗಿ ವಿಡಿಯೋಗಳನ್ನೇ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ವಾಟ್ಸಾಪ್ ಗ್ರೂಪ್ಗಳಲ್ಲಿ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪತಿ ವಿರುದ್ಧ ಪತ್ನಿಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ಬೆನ್ನಲ್ಲೇ ಆರೋಪಿಯ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸೀಫ್ನ ಪುತ್ರಿ ತೀರ್ಥಹಳ್ಳಿಯ ತಮ್ಮ ಸಂಬಂಧಿ ಆಗಿರುವ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಇದು ಯುವತಿಯ ತಂದೆಗೆ ಇಷ್ಟವಿರಲಿಲ್ಲ. ಈ ಕೋಪದಿಂದ ಪುತ್ರಿಯ ಫೋಟೋ, ವಿಡಿಯೋಗಳನ್ನು ಸಂಬಂಧಿ ಹುಡುಗನ ಜೊತೆಗಿನ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದಾನೆ. ಅಲ್ಲದೇ ಮಗಳು ಪ್ರೀತಿಸುತ್ತಿದ್ದ ಹುಡಗನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದನಂತೆ. ಬಳಿಕ ಆ ಹುಡುಗನ ಮತ್ತು ತನ್ನ ಮಗಳ ಫೋನ್ಗಳನ್ನು ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್ಗೆ ವರ್ಗಾಯಿಸಿಕೊಂಡು ಅವುಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗ್ರೂಪ್ಗಳಿಗೆ ಕಳುಹಿಸಿದ್ದಾನೆ ಎಂದು ಅರೋಪಿಸಲಾಗಿದೆ.