ಅಂಕೋಲಾ ತಾಲೂಕಿನ ಶಿರೂರು ಬಳಿ ಭೀಕರ ಗುಡ್ಡ ಕುಸಿತ-ಮಣ್ಣಿನಡಿ ಸಿಲುಕಿ ನಾಪತ್ತೆಯಾದ ಐವರು

ಅಂಕೋಲಾ ಜುಲೈ 16 : ಉತ್ತರ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರ ಬಳಿ ಗಂಗಾವಳಿ ನದಿಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಗುಡ್ಡ ಕುಸಿತವಾಗಿದ್ದು, ಮಣ್ಣಿನಡಿ ಸಿಲುಕಿ 5 ಜನರು ನಾಪತ್ತೆಯಾದ ಘಟನೆ ನಡೆದಿದೆ..

ಗಂಗಾವಳಿ ನದಿಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಗುಡ್ಡ ಕುಸಿತದ ಪರಿಣಾಮ ಗುಡ್ಡ ಕುಸಿತದಲ್ಲಿ ಸಿಲುಕಿದ‌ ಗ್ಯಾಸ್ ಟ್ಯಾಂಕರ್‌ವೊಂದು ನದಿಪಾಲಾಗಿದೆ.

ಇನ್ನು ಗುಡ್ಡ ಕುಸಿತದ ಭೀಕರತೆಗೆ ಅಕ್ಕಪಕ್ಕದಲ್ಲಿದ್ದ ಕೆಲವು ಜನ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಹೆಚ್ಚಾಗಿದೆ..ಇನ್ನೂ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ 5 ಜನರು ಮಣ್ಣಿನಡಿ ಸಿಲುಕಿ ನಾಪತ್ತೆಯಾಗಿದ್ದಾರೆ..

ಘಟನೆಯಲ್ಲಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ (36) ರೋಶನ್(11)‌ ಅವಂತಿಕಾ(6) ಜಗನ್ನಾಥ(55) ಎಂಬ ಒಂದೇ ಕುಟುಂಬದ ಐವರು ನಾಪತ್ತೆಯಾದವರು. ಇನ್ನೂ ಹಲವೆಡೆ ಗುಡ್ಡ ಕುಸಿಯುವ ಸಾಧ್ಯತೆ ಹೆಚ್ಚಾಗಿದ್ದು, ಅಂಕೋಲಾ-ಕಾರವಾರ ರಾಷ್ಟ್ರೀಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ..ಜೊತೆಗೆ ಗಂಗಾವಳಿ ನದಿಯೂ ಕೂಡ ಅಪಾಯುದ ಮಟ್ಟ ಮೀರಿ ಹರಿಯುತ್ತಿದ್ದು, ಮತ್ತಷ್ಟು ಅವಾಂತರಗಳು ಸೃಷ್ಟಿಯಾಗುವ ಸಾಧ್ಯತೆ ಇದೆ….