ಅಂಕೋಲಾ ಜುಲೈ 22: ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಪಟ್ಟಣದ ಕಿತ್ತೂರಾಣಿ ಚೆನ್ನಮ್ಮ ರಸ್ತೆಯ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಮುಂದೆ ಗಾತ್ರದ ಮರವೊಂದು ಬುಡಸಮೇತ ಉರುಳಿ ಬಿದ್ದಿದೆ.
ಪಟ್ಟಣದ ಮುಖ್ಯ ರಸ್ತೆ ಇದಾಗಿದ್ದು ಬೃಹತ್ ಗಾತ್ರದ ಸಾಗವಾನಿ ಮರ ಹಠಾತ್ ಉರುಳಿ ಬಿದ್ದಿದೆ. ಬಲಭಾಗದಿಂದ ಬಿದ್ದ ಮರವು ಸಂಪೂರ್ಣವಾಗಿ ರಸ್ತೆಯನ್ನು ಆವರಿಸಿ ಎಡಭಾಗದ ವಿದ್ಯುತ್ ತಂತಿಯ ಮೇಲೆ ಉರುಳಿ ಬಿದ್ದಿದೆ. ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿದ್ದು ಪೋಲಿಸ್ ಇಲಾಖೆ ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲಿಯೇ ಸ್ಪಂದಿಸುವುದಾಗಿ ಪೊಲೀಸ್ ಇಲಾಖೆ ತಿಳಿಸಿದ