ದಕ್ಷಿಣ ಕನ್ನಡ : ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ನಿನ್ನೆ ರಾತ್ರಿ ಗುಡ್ಡ ಕುಸಿದಿತ್ತು. ಹೀಗಾಗಿ ಕೊಟ್ಟಿಗೆಹಾರವರೆಗೂ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ಪೊಲೀಸರು ವಾಪಸ್ ಕಳಿಸಿದ್ರು. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.
ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ತಡ ರಾತ್ರಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು. ಮಂಗಳೂರಿಗೆ ತೆರಳುವವರನ್ನು ಪೊಲೀಸರು ಕೊಟ್ಟಿಗೆಹಾರದಲ್ಲೇ ತಡೆದು ವಾಪಸ್ ಕಳಿಸಿದ್ದಾರೆ.