ಕರ್ನಾಟಕದಲ್ಲಿ ಕಳೆದ ಎರಡು ವಾರಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದಿನಿಂದ ಮಳೆ ಕೊಂಚ ಬಿಡುವು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಲೋಂಡಾ, ಕದ್ರಾ, ಯಲ್ಲಾಪುರ, ಸಿದ್ದಾಪುರ, ಬೆಳಗಾವಿ, ಕಮ್ಮರಡಿ, ಗೇರುಸೊಪ್ಪ, ಕಾರವಾರ, ಬನವಾಸಿ, ಗೋಕರ್ಣ, ಧರ್ಮಸ್ಥಳ, ಹಳಿಯಾಳ, ಬೆಳ್ತಂಗಡಿ, ಉಪ್ಪಿನಂಗಡಿ, ಔರಾದ್, ಶೃಂಗೇರಿ, ಸೋಮವಾರಪೇಟೆ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ. ನಗರದಲ್ಲಿ 28.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.