ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 7ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗಲಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಭಾಗಮಂಡಲ, ಮೂರ್ನಾಡು, ನಾಪೊಕ್ಲು, ಯಲ್ಲಾಪುರ, ಕೊಲ್ಲೂರು, ಕೊಟ್ಟಿಗೆಹಾರ, ಪೊನ್ನಂಪೇಟೆ, ಕಮ್ಮರಡಿ, ಧರ್ಮಸ್ಥಳ, ಲೋಂಡಾ, ಬೆಳಗಾವಿ, ಕಳಸ, ಆಗುಂಬೆ, ಸಿದ್ದಾಪುರ, ಬೆಳ್ತಂಗಡಿ, ಶೃಂಗೇರಿ, ಸುಳ್ಯ, ಎನ್ಆರ್ಪುರ, ಉಪ್ಪಿನಂಗಡಿ, ಕುಮಟಾ, ನಿಪ್ಪಾಣಿ, ಕಮಲಾಪುರ, ಚಿತ್ತಾಪುರ, ಬಾಳೆಹೊನ್ನೂರು, ಹಾರಂಗಿ, ಎಚ್ಡಿ ಕೋಟೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬರಗಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.