ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಹೆಚ್ಚಾಗಲಿದೆ ವರುಣನ ಅಬ್ಬರ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಇಂದಿನಿಂದ ಕರ್ನಾಟಕದಾದ್ಯಂತ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್​, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲೂ ಮಳೆಯಾಗಲಿದೆ.

ಕಳಸ, ನಾಪೊಕ್ಲು, ಧರ್ಮಸ್ಥಳ, ಕೊಪ್ಪ, ಪೊನ್ನಂಪೇಟೆ, ಕ್ಯಾಸಲ್​ರಾಕ್, ಮೂರ್ನಾಡು, ಭಾಗಮಂಡಲ, ಕೊಟ್ಟಿಗೆಹಾರ, ಮಾಣಿ, ಸುಳ್ಯ, ಬೆಳ್ತಂಗಡಿ, ಜಯಪುರ, ಯಲ್ಲಾಪುರ, ಉಪ್ಪಿನಂಗಡಿ, ಕೊಲ್ಲೂರು, ಆನವಟ್ಟಿ, ಸೋಮವಾರಪೇಟೆ, ಎನ್​ಆರ್​ಪುರ, ಕದ್ರಾ, ಪುತ್ತೂರು, ಸಿದ್ದಾಪುರ, ಕಾರ್ಕಳ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಬನವಾಸಿ, ಮುಂಡಗೋಡು, ಹಾರಂಗಿ, ಕುಶಾಲನಗರ, ಕೊಳ್ಳೇಗಾಲ, ಗೇರುಸೊಪ್ಪ, ಉಡುಪಿ, ಹುಬ್ಬಳ್ಳಿ, ಸವಣೂರು, ಬೆಳಗಾವಿ, ಬಂಡೀಪುರ, ಅಂಕೋಲಾ, ಕೋಟ, ಮೂಡಿಗೆರೆ, ಕಲಘಟಗಿ, ಪರಶುರಾಂಪುರ, ಅಜ್ಜಂಪುರ, ಮದ್ದೂರು, ಲಕ್ಷ್ಮೇಶ್ವರ, ಕೆಆರ್​ನಗರ, ಕೃಷ್ಣರಾಜಪೇಟೆ, ಕಡೂರು, ಹಡಗಲಿ, ನಾಯಕನಹಟ್ಟಿ, ಕೊಟ್ಟೂರು, ಹುಣಸೂರು, ಕೃಷ್ಣರಾಜಸಾಗರ, ಕುಣಿಗಲ್​ನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರವೂ ಮಳೆಯಾಗಿದೆ ಇಂದೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 30.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.