ದಾಂಡೇಲಿ : ತಾಲೂಕಿನ ಕೋಗಿಲೆಬನ -ಬಡಕಾನಶಿರಡಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೋಗಿಲಬನ ಗ್ರಾಮದ ಗಾವಠಾಣಕ್ಕೆ ರಸ್ತೆ ಸಂಪರ್ಕವಿಲ್ಲದೆ ಸ್ಥಳೀಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಗದ್ದೆಯಲ್ಲಿ ನಡೆದುಕೊಂಡು ಹೋಗಬೇಕಾದ ಸ್ಥಿತಿ ಇರುವುದರಿಂದ ರಸ್ತೆ ಸಂಪರ್ಕವನ್ನು ಕಲ್ಪಿಸಿ ಕೊಡುವಂತೆ ಸ್ಥಳೀಯ ಗ್ರಾಮಸ್ಥರು ಮಂಗಳವಾರ ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.
ಗಾವಠಾಣ ವ್ಯಾಪ್ತಿಯಲ್ಲಿ 20 ರಿಂದ 30 ಮನೆಗಳಿದ್ದು, ಇಲ್ಲಿಯ ಜನರಿಗೆ ನಿತ್ಯ ಓಡಾಡಲು ರಸ್ತೆ ಸಂಪರ್ಕ ಇಲ್ಲದೆ ಇರುವುದರಿಂದ ತೀವ್ರ ತೊಂದರೆಯಾಗಿದೆ. ಶಾಲಾ ವಿದ್ಯಾರ್ಥಿಗಳು ಅದು ಈಗಂತೂ ತುಂಬಿದ ಮಳೆಗಾಲದ ಸಂದರ್ಭದಲ್ಲಿ ನೀರು ನಿಂತ ಗದ್ದೆಯಲ್ಲಿ ನಡೆದುಕೊಂಡೆ ಹೋಗಬೇಕಾದ ಪರಿಸ್ಥಿತಿ ಇಲ್ಲಿದೆ. ಆದ್ದರಿಂದ ಕಳೆದ ಅನೇಕ ವರ್ಷಗಳಿಂದಿರುವ ಬೇಡಿಕೆಯಾಗಿರುವ ರಸ್ತೆ ಸಂಪರ್ಕವನ್ನು ಕಲ್ಪಿಸಿ ಕೊಡುವಂತೆ ಸ್ಥಳೀಯ ಗ್ರಾಮಸ್ಥರು ಮಾಧ್ಯಮದ ಮೂಲಕ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮನವಿಯನ್ನು ಮಾಡಿದ್ದಾರೆ .