ಭಾರತಕ್ಕೆ ಮೂರನೇ ಪದಕ- ಕಂಚು ಗೆದ್ದ ಸ್ವಪ್ನಿಲ್

ಪ್ಯಾರಿಸ್‌: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ಗೆದ್ದುಕೊಂಡಿದೆ.

50 ಮೀ. ರೈಫ‌ಲ್‌ 3 ಪೊಸಿಶನ್‌ನಲ್ಲಿ ಸ್ವಪ್ನಿಲ್‌ ಕುಸಾಲೆ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಗುರುವಾರ ನಡೆದ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು.

ಭಾರತ ಈ ಬಾರಿ ಗೆದ್ದ ಮೂರು ಕಂಚಿನ ಪದಕಗಳು ಶೂಟಿಂಗ್‌ನಿಂದಲೇ ಬಂದಿರುವುದು ವಿಶೇಷ. ಇದಕ್ಕೂ ಮೊದಲು ಮನು ಭಾಕರ್ ಎರಡು ಕಂಚಿನ ಪದಕ ಗೆದ್ದಿದ್ದರು.