ಕರ್ನಾಟಕದ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಕಾರ್ಕಳ, ಅಂಕೋಲಾ, ಕ್ಯಾಸಲ್ರಾಕ್, ಸಿದ್ದಾಪುರ, ಆಗುಂಬೆ, ಮುಲ್ಕಿ, ಕದ್ರಾ, ಧರ್ಮಸ್ಥಳ, ಬೆಳ್ತಂಗಡಿ, ಕುಂದಾಪುರ, ಗೋಕರ್ಣ, ಕುಮಟಾ, ಶಿರಾಲಿ, ಗೇರುಸೊಪ್ಪ, ಮಂಕಿ, ಕಾರವಾರ, ಉಪ್ಪಿನಂಗಡಿ, ಪುತ್ತೂರು, ಮಂಗಳೂರು, ಮಾಣಿ, ಕೋಟ, ಉಡುಪಿ, ಸುಳ್ಯ, ಲೋಂಡಾ, ಶೃಂಗೇರಿ, ಸಿದ್ದಾಪುರ, ಲಿಂಗನಮಕ್ಕಿ, ಕಳಸದಲ್ಲಿ ಭಾರಿ ಮಳೆಯಾಗಿದೆ.
ಜೋಯಿಡಾ, ನಾಪೋಕ್ಲು, ಕೊಟ್ಟಿಗೆಹಾರ, ಹೆಸರಘಟ್ಟ, ಮಾಗಡಿ, ವಿರಾಜಪೇಟೆ, ಮೂರ್ನಾಡು, ಯಲ್ಲಾಪುರ, ಪೊನ್ನಂಪೇಟೆ, ಜಿಕೆವಿಕೆ, ಕಮ್ಮರಡಿ, ಕಿರವತ್ತಿ, ಹಳಿಯಾಳ, ಬನವಾಸಿ, ಹಾವೇರಿ, ಕುಣಿಗಲ್, ಹೊಸಕೋಟೆ, ಬೆಂಗಳೂರು ನಗರ, ಗುಬ್ಬಿ, ಬಾಳೆಹೊನ್ನೂರು, ಹುಣಸೂರು, ಧಾರವಾಡ, ಹುಂಚದಕಟ್ಟೆ, ಎನ್ಆರ್ಪುರ, ಕುಶಾಲನಗರ, ಎಚ್ಡಿ ಕೋಟೆ, ಬೇಗೂರು, ಶ್ರವಣಬೆಳಗೊಳ, ನಂಜನಗೂಡು, ಮದ್ದೂರಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ರಾತ್ರಿ ಮಳೆಯಾಗಿದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2ಡಿಗ್ರಿನ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.