ಕರ್ನಾಟಕದಾದ್ಯಂತ ಮಳೆ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಸಿದ್ದಾಪುರ, ಲೋಂಡಾ, ಕಾರ್ಕಳ, ಕಾರವಾರ, ಗೇರುಸೊಪ್ಪ, ಹೊನ್ನಾವರ, ಕೊಲ್ಲೂರು, ಶೃಂಗೇರಿ, ಗೋಕರ್ಣ, ಮುಲ್ಕಿ, ಕದ್ರಾ, ಲಿಂಗನಮಕ್ಕಿ, ಕಮ್ಮರಡಿ, ಭಾಗಮಂಡಲ, ಜಯಪುರದಲ್ಲಿ ಭಾರಿ ಮಳೆಯಾಗಿದೆ. ಕುಮಟಾ, ಉಡುಪಿ, ಅಂಕೋಲಾ, ಬೆಳ್ತಂಗಡಿ, ಧರ್ಮಸ್ಥಳ, ಮಾಣಿ, ಯಲ್ಲಾಪುರ, ಕೊಪ್ಪ, ಮೂಡಿಗೆರೆ, ಹಾರಂಗಿ, ಪುತ್ತೂರು, ಸುಳ್ಯ, ಬನವಾಸಿ, ಬೆಳಗಾವಿ, ನಾಪೋಕ್ಲು, ಹುಂಚದಕಟ್ಟೆ, ಮೂರ್ನಾಡು, ಬಾಳೆಹೊನ್ನೂರು, ಹಳಿಯಾಳ, ಹೊಸಕೋಟೆ, ಕೊಟ್ಟಿಗೆಹಾರ, ಎನ್ಆರ್ಪುರ, ಆನವಟ್ಟಿ, ಭಾಲ್ಕಿ, ನಿಪ್ಪಾಣಿ, ಸೇಡಂ, ದೇವನಹಳ್ಳಿ, ಪೊನ್ನಂಪೇಟೆ, ನಾಯಕನಹಟ್ಟಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 27.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪಣಂಬೂರಿನಲ್ಲಿ 27.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.