ಕರ್ನಾಟಕದಾದ್ಯಂತ ಮಳೆಯ ಅಬ್ಬರ ಇಂದಿನಿಂದ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಆನವಟ್ಟಿ, ಆಗುಂಬೆ, ಕ್ಯಾಸಲ್ರಾಕ್, ಗೇರುಸೊಪ್ಪ, ಕದ್ರಾ, ಕೋಟ, ಶೃಂಗೇರಿ, ಸಿದ್ದಾಪುರ, ಕುಮಟಾ, ಮುಲ್ಕಿ, ಮಾಣಿ, ಕಾರವಾರ, ಯಲ್ಲಾಪುರ, ಪುತ್ತೂರು, ಹೊನ್ನಾವರ, ಕೊಪ್ಪ, ಜಯಪುರ, ಧರ್ಮಸ್ಥಳ, ಸಿದ್ದಾಪುರ, ಕುಂದಾಪುರ, ಮಂಗಳೂರು, ಕಾರ್ಕಳ, ಬೆಳಗಾವಿ, ಗೋಕರ್ಣ, ಸುಳ್ಯ, ಹಳಿಯಾಳ, ಬೆಳ್ತಂಗಡಿಯಲ್ಲಿ ಮಳೆಯಾಗಿದೆ.
ಲೋಂಡಾ, ಬಾಳೆಹೊನ್ನೂರು, ಕಳಸ, ಭಾಗಮಂಡಲ, ತ್ಯಾಗರ್ತಿ, ಸೋಮವಾರಪೇಟೆ, ಹುಂಚದಕಟ್ಟೆ, ಹಿಡಿಯೂರು, ಕಿರವತ್ತಿ, ಹಾಸನ, ಹಾರಂಗಿ, ದೊಡ್ಡಬಳ್ಳಾಪುರ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ. ಕೆಐಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.