ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ

ಬೆಂಗಳೂರು, ಆಗಸ್ಟ್ 5: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.