ಇಂದು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಇಂದೂ ಭಾರೀ ಮಳೆಯಾಗಲಿದ್ದರೆ ದಕ್ಷಿಣ ಕನ್ನಡದಲ್ಲಿ ಸಾಧಾರಣ‌ ಮಳೆಯ ಮುನ್ಸೂಚನೆ ನೀಡಿದೆ.

ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.