ವಲಸೆ ಕಾರ್ಮಿಕನ ಮೇಲೆ ಉಗ್ರಗಾಮಿಗಳಿಂದ ಗುಂಡಿನ ದಾಳಿ

ಜಮ್ಮು-ಕಾಶ್ಮೀರ: ಬಂಡಿಪೋರಾ ಜಿಲ್ಲೆಯ ಸೋದನಾರ ಸುಂಬಲ್ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ಉಗ್ರಗಾಮಿಗಳು ಬಿಹಾರ ಮೂಲದ ಕಾರ್ಮಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಕಾರ್ಮಿಕ ಮೊಹಮ್ಮದ್ ಅಮ್ರೇಜ್ ಎಂದು ಗುರುತಿಸಲಾಗಿದೆ. ಗುಂಡು ತಗುಲಿದ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರೂ ತೀವ್ರವಾಗಿ ಗಾಯಗೊಂಡಿದ್ದರಿAದ ಮೃತಪಟ್ಟಿದ್ದಾನೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದರು.