ಕಾರವಾರ: ಆ.15 ಸೋಮವಾರದಂದು ಸ್ವಾತಂತ್ರ್ಯೋತ್ಸವದ ನಿಮಿತ್ತ ಕಾರವಾರ ನಗರದಲ್ಲಿ ಭಾನುವಾರ ನಡೆಯುವ ವಾರದ ಸಂತೆಯನ್ನು ಶನಿವಾರ ನಡೆಸಲಾಗುತ್ತದೆ ಎಂದು ನಗರಸಭೆ ಆಯುಕ್ತರು ತಿಳಿಸಿದ್ದಾರೆ.
ಆ. 15 ರಂದು ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದ್ದರಿಂದ ನಗರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಭಾನುವಾರ ನಡೆಯುವ ಸಂತೆಯನ್ನು 13ನೇ ತಾರೀಖು ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ. ಶನಿವಾರ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ರವಿವಾರ ಸಂತೆ ನಡೆಸಲು ಅವಕಾಶವಿರುವುದಿಲ್ಲ. ಈ ಕಾರಣದಿಂದ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.