ಕಾರವಾರ: ಪರೇಶ್ ಮೇಸ್ತಾ ಪ್ರಕರಣದಲ್ಲಿ ಆರೋಪಿಯಾದ ಹೊನ್ನಾವರದ ಅಜಾದ್ ಅಣ್ಣಿಗೇರಿಗೆ ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ನಂತರ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.
ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಆರೋಪಿತನಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಿರುವುದು ಬಿಜೆಪಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಅದಲ್ಲದೇ ವಕ್ಫ್ ಬೋರ್ಡ್ ಪದಾಧಿಕಾರಿಗಳನ್ನ ಬದಲಿಸುವಂತೆ ವಕ್ಫ್ ಬೋರ್ಡ ಅಧ್ಯಕ್ಷ ಅನೀಷ್ ತಹಶಿಲ್ದಾರ್ ಸಚಿವರಿಗೆ ಪತ್ರ ಬರೆದಿದ್ದಾರೆ.