ಶಿವಮೊಗ್ಗ: ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಹೊಸನಗರ ತಾಲೂಕಿನ ಗೇರುಪುರ ಮೂಲದ ಸಂಗೀತ (38) ಎಂದು ಗುರುತಿಸಲಾಗಿದೆ. ಹೊಸನಗರ ಪಟ್ಟಣದಲ್ಲಿ ವಾಸವಾಗಿದ್ದ ಸಂಗೀತ ಅವರು ಜುಲೈ 14 ರಂದು ನಾಯಿ ಕಡಿತಕ್ಕೊಳಗಾಗಿದ್ದರು. ಹೊಸನಗರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಸಂಗೀತ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಗೀತ ಆ.23ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.