ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಅಬ್ಬರದಿಂದ ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿ ಆಗಿದ್ದು ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ.
ಭರ್ತಿಯಾದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಈಗಾಗಲೇ 13 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದ ನೀರು ಬಿಡುವ ಸಾಧ್ಯತೆ ಇದ್ದು ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ನದಿ ತೀರದಲ್ಲಿ ಪ್ರವಾಹ ಆತಂಕ ಹೆಚ್ಚಾಗಿದೆ. ಕೃಷ್ಣಾ ನದಿ ನೀರಿನ ಒಳ ಹರಿವಿನಲ್ಲೂ ಭಾರೀ ಪ್ರಮಾಣದ ಏರಿಕೆಯಾಗಿದೆ.
ಕೃಷ್ಣಾ ನದಿಗೆ 1 ಲಕ್ಷ 13 ಸಾವಿರ ಕ್ಯುಸೆಕ್ ಒಳ ಹರಿವು ಇದೆ. ಎರಡನೇ ಬಾರಿ ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದೆ. ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲೂಕುಗಳ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಜೋರಾಗಿದೆ.