ಬೆಂಗಳೂರು: ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬುಧವಾರ ನಡೆದಿದೆ.
ಸುಮಾರು 60 ವರ್ಷದ ಮಹಿಳೆ ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿವೆ. ಘಟನೆಯ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರ ಛಿದ್ರಗೊಂಡಿದೆ.
ಮೃತ ಮಹಿಳೆಯ ಅಳಿಯ ಏರ್ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ-ಮಗಳನ್ನ ಭೇಟಿಯಾಗಲು ಮಹಿಳೆ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದರು. ಬುಧವಾರ ಬೆಳಗ್ಗೆ ವಾಕ್ ಮಾಡುವಾಗ ಈ ಘಟನೆ ನಡೆದಿದೆ. ಮಹಿಳೆ ಮೃತದೇಹವನ್ನು ವೈದ್ಯರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಹಿಂದೆಯೂ ಇದೇ ಕ್ಯಾಂಪಸ್‌ನಲ್ಲಿ ನಾಲ್ಕೈದು ಜನರ ಮೇಲೆ ದಾಳಿ ಮಾಡಿತ್ತು ಎಂದು ಮೂಲಗಳು ತಿಳಿಸಿವೆ.