ಕೊಪ್ಪಳ, ಸೆ.01: ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಪರಶುರಾಮ (40) ಹಾಗೂ ಹನುಮಂತ (35) ಮೃತ ದುರ್ದೈವಿಗಳು. ಇನ್ನು ಘಟನೆ ಬಳಿಕ ಸ್ಥಳದಿಂದ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶಿಲನೆ ನಡೆಸಿದ್ದಾರೆ.