ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕಾರವಾರ: ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್‌ನಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪ ಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಮೆಟ್ರಿಕ್ ಪೂರ್ವ (1 ರಿಂದ 10ನೇ ತರಗತಿ), ಮೆಟ್ರಿಕ್ ನಂತರದ (ಪಿ.ಯು.ಸಿ ಯಿಂದ ಪಿ.ಹೆಚ್.ಡಿ ವರೆಗಿನ) ಹಾಗೂ ಮೆರಿಟ್-ಕಂ-ಮೀನ್ಸ್ (ತಾಂತ್ರಿಕ ವೃತ್ತಿಪರ ಕೋರ್ಸ್ಗಳಿಗೆ) ವಿದ್ಯಾರ್ಥಿಗಳಿಗೆ 2022-23ನೇ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ಸೆ. 30 ಹಾಗೂ ಮೆಟ್ರಿಕ್ ನಂತರದ, ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆಕ್ಟೋಬರ್ 31 ಕೊನೆಯ ದಿನವಾಗಿದೆ. NSP ಯಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಇಲ್ಲವಾದಲ್ಲಿ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ 50% ಗಿಂತ ಹೆಚ್ಚಿನ ಅಂಕಗಳಿಸಿರಬೇಕು ಹಾಗೂ ಕರೆಸ್ಪಾಂಡೆನ್ಸ್ ಶಿಕ್ಷಣ, ಸರ್ಟಿಫಿಕೇಟ್ ಕೋರ್ಸ್, ತರಬೇತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ.

https://scholarships.gov.in/ ವೆಬ್ ಸೈಟ್ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಪ್ರತಿಯೊಂದಿಗೆ ಅಗತ್ಯ ದಾಖಲೆಯನ್ನೊಳಗೊಂಡ ಒಂದು ಪ್ರತಿಯನ್ನು ಓದುತ್ತಿರುವ ಶಾಲೆ, ಕಾಲೇಜಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in/ ಅಥವಾ Twitter id : @WelfareUttara ಅಥವಾ ಆಯಾ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಇಲ್ಲವೇ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆ 08382-220336/ ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.