ರಾಮನಗರ: ರಸ್ತೆ ಅಪಘಾತದಲ್ಲಿ ಮೂವರು ಸಾವು

ರಾಮನಗರ ಸೆಪ್ಟೆಂಬರ್​ 06: ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮೂರ್ತಿ (39), ಶೇಖ್ ಆಸೀಫ್ (45), ವೆಂಕಟೇಶ್ (50)‌ ಮೃತ ದುರ್ದೈವಿಗಳು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮತ್ತೋರ್ವ ಸಾವೀಗಿಡಾಗಿದ್ದಾನೆ.