ಅಂಕೋಲಾ: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ಅಂಕೋಲಾ ಮಂಡಲದಿಂದ ಬೃಹತ್ ಬೈಕ್ ರ್ಯಾಲಿಯನ್ನು ಇಂದು ನಡೆಸಲಾಯಿತು.
ಕಾರವಾರ – ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ಎಸ್ ನಾಯ್ಕ್ ತಾಲೂಕಿನ ಶ್ರೀ ಶಾಂತದುರ್ಗಾದೇವಿ ದೇವಸ್ಥಾನದಲ್ಲಿ ರ್ಯಾಲಿಗೆ ಚಾಲನೆ ಕೊಟ್ಟರು. ಅಲ್ಲದೇ ಸುರಿಯುತ್ತಿರುವ ಮಳೆಯ ನಡುವೆಯೂ ಶಾಸಕರು ಕಾರ್ಯಕರ್ತರೊಂದಿಗೆ ಸ್ವತಃ ಬೈಕ್ ಚಲಾಯಿಸಿ ರ್ಯಾಲಿಯಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿತ್ತು.
ರ್ಯಾಲಿಯಲ್ಲಿ ಕಾರ್ಯಕರ್ತರು, ದೇಶಾಭಿಮಾನಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.