ಜೋಗಕ್ಕೆ ಹೋಗುವ ಪ್ರವಾಸಿಗರೇ ಎಚ್ಚರವಾಗಿರಿ – ರಸ್ತೆಯಲ್ಲೇ ಹಸುವನ್ನು ಬೇಟೆಯಾಡಿದ ಕರಿ ಚಿರತೆ

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರೇ ಎಚ್ಚರವಾಗಿರಿ. ಜೋಗ ಜಲಪಾತಕ್ಕೆ ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು ಹಸುವನ್ನು ಬೇಟೆಯಾಡಿದೆ.

ಸಾಗರ ತಾಲೂಕಿನ ವಡನಬೈಲಿನಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಹಸುವನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ದಿದೆ.

ಕರಿಚಿರತೆ ಹಸುವನ್ನು ಬೇಟೆಯಾಡುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ.