ಕಳೆದ ಎರಡು ದಿನಗಳಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಉಳಿದೆಡೆ ಮಳೆ ಕಡಿಮೆ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.
ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಗೇರುಸೊಪ್ಪ, ಮುಲ್ಕಿ, ಪಣಂಬೂರು, ಮಂಗಳೂರು, ಕಾರ್ಕಳ, ಕೋಟ, ಮಾಣಿ, ಧರ್ಮಸ್ಥಳ, ಕೊಲ್ಲೂರು, ಕುಂದಾಪುರ, ಮಂಗಳೂರು, ಬೆಳ್ತಂಗಡಿ, ಸಿದ್ದಾಪುರ, ಯಲ್ಲಾಪುರ, ಹೊನ್ನಾವರ, ಗೋಕರ್ಣ, ಶಿರಾಲಿ, ಹಾಸನ, ಭಾಗಮಂಡಲ, ಕೊಪ್ಪ, ಶೃಂಗೇರಿ, ಎನ್ಆರ್ಪುರ, ಜಯಪುರ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ನಿತ್ಯ ತುಂತುರು ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.