ಹಿರಿಯ ರಾಜಕಾರಣಿ, ರೈತ ಮುಖಂಡ ಮಲ್ಲಿಕಾರ್ಜುನ ಕುಟ್ರಿ ನಿಧನ

ಮುಂಡಗೋಡ: ಹಿರಿಯ ರಾಜಕಾರಣಿ, ರೈತ ಮುಖಂಡ ಹಾಗೂ ಸ್ನೇಹಜೀವಿಯಾಗಿದ್ದ ತಾಲೂಕಿನ ಕೊಪ್ಪ ಗ್ರಾಮದ ಮಲ್ಲಿಕಾರ್ಜುನ ಕುಟ್ರಿ (59) ಶುಕ್ರವಾರ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಫದ ಸಮಸ್ಯೆಯಿಂದ ಧಾರವಾಡದ ಎಸ್.ಡಿ.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಎಪಿಎಂಸಿ ಅಧ್ಯಕ್ಷರಾಗಿ, ಜಾತ್ಯತೀತ ಜನತಾದಳದ ಮುಂಡಗೋಡ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇಂದೂರ, ಕೊಪ್ಪ ಗ್ರಾಮಗಳಲ್ಲಿ ಪ್ರತಿಯೊಂದು ರಾಜಕೀಯ, ಧಾರ್ಮಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತಿದ್ದ ಕುಟ್ರಿ ಅವರು ಇಂದು ಇಹಲೋಕ ತ್ಯಜಿಸಿದ್ದು ಸಮಾಜಕ್ಕೆ ನಷ್ಟವಾಗಿದೆ.