ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ತುಮಕೂರು, ಸೆಪ್ಟೆಂಬರ್​ 15: ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ದುರ್ಘಟನೆ ಸಂಭವಿಸಿದೆ. ತಂದೆ ರೇವಣ್ಣ(46), ಪುತ್ರ ಶರತ್(26), ದಯಾನಂದ ಮೃತರು. ಇಂದು ಗ್ರಾಮದಲ್ಲಿ ಇಟ್ಟಿದ್ದ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.

ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸಿದ್ದು, ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.