ಕರ್ನಾಟಕದಲ್ಲಿ ಮಳೆಗಾಲ ಕಳೆಯುತ್ತಿದ್ದಂತೆ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ರಾತ್ರಿ ಹೊತ್ತು ತಣ್ಣನೆಯ ಗಾಳಿ ಬೀಸುತ್ತಿದ್ದರೂ ಹಗಲಿನಲ್ಲಿ ತಾಪಮಾನ ಹೆಚ್ಚಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.
ಮಂಕಿ, ಹೊನ್ನಾವರದಲ್ಲಿ ಮಳೆಯಾಗಿದೆ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಸಂಜೆ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.