ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಇತ್ತು. ಬೆಂಗಳೂರಿನ ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಹೊನ್ನಾವರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.