ವಿದ್ಯಾರ್ಥಿನಿಯ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ, ಅನುಮಾನಾಸ್ಪದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ

ರಾಮನಗರ, ಸೆಪ್ಟೆಂಬರ್​ 20: ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಕೇಳಿಬಂದಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ. ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿದ್ದು, ಅನುಮಾನಾಸ್ಪದ ಯುವಕ ಮತ್ತು ಆತನ ಮೊಬೈಲ್​ನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಆರೋಪ ಕೇಳಿಬರುತ್ತಿದ್ದಂತೆ ವಿದ್ಯಾರ್ಥಿನಿಯರಿಂದ ಗಲಾಟೆ ಮಾಡಲಾಗಿದೆ. ಯುವಕನನ್ನು ಬಂಧಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ನ್ಯಾಯ ಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸದ್ಯ ಸ್ಥಳಕ್ಕೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದಾರೆ.