ಬೆಂಗಳೂರು: ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.
ಮಹಿಳೆಯನ್ನು ಕೊಂದು ನಂತರ ಮೃತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಹತ್ಯೆ ಬಳಿಕ ಮಾಂಸದ ಗುಡ್ಡೆ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿ ಮಗುವನ್ನು ಮನೆಯಲ್ಲೇ ಬಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
2-3 ತಿಂಗಳಿನಿಂದ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ. ಮನೆಯಲ್ಲಿ ಯಾರಲ್ಲಾ ಇದ್ದರು ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಿದೆ.
ಕಳೆದ ಎರಡು ವರ್ಷಗಳ ಹಿಂದೆ ದೆಹಲಿಯಲ್ಲೂ ಇದೇ ಮಾದರಿಯ ಘಟನೆಯೊಂದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಆರೋಪಿ ಅಫ್ತಾಬ್ ಪೂನಾವಾಲಾ ಎಂಬಾತ ತನ್ನ ಲಿವ್ ಇನ್ ಗೆಳತಿ ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ್ದ ಘಟನೆ ನಡೆದಿತ್ತು. ಅಫ್ತಾಬ್ ತನ್ನ ಗೆಳತಿ ಶ್ರದ್ಧಾ ವಾಕರ್ ಕತ್ತು ಹಿಸುಕಿ ಕೊಲೆ ಮಾಡಿದ ನಂತರ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ನಂತರ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು 3 ವಾರಗಳ ಕಾಲ 300 ಲೀ. ಫ್ರಿಡ್ಜ್‍ನಲ್ಲಿ ಇರಿಸಿದ್ದ. ನಂತರ ವಿವಿಧೆಡೆ ಬಿಸಾಡಿದ್ದ. ಇದೀಗ ಅದೇ ರೀತಿಯ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.