ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಕೂಡ ಮಳೆಯಾಗಲಿದೆ.
ಚಿಟಗುಪ್ಪ, ಉಡುಪಿ, ಹುಮನಾಬಾದ್, ಪಣಂಬೂರು, ಮಂಠಾಳ, ಮಾಣಿ, ಕೆಂಭಾವಿ, ಟಿಕ್ಕೋಟ, ಮೂಲ್ಕಿ, ಭಾಲ್ಕಿ, ವಿಜಯಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಶನಿವಾರ ಮಳೆಯಾಗಿದೆ, ಎಚ್ಎಎಲ್ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.