ಭಟ್ಕಳ ಸೆ.22 : ಭಟ್ಕಳದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉ.ಕ ಹಾಗೂ ಭಟ್ಕಳ ಘಟಕ ವತಿಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದು ತಾಲೂಕಾಡಳಿತದಿಂದ ಪ್ರತಿಭಟನೆ ಸ್ಥಳವನ್ನು ಶನಿವಾರ ಸಂಜೆ ಖುಲ್ಲಾ ಪಡಿಸಿದ್ರು.
ಹಲವಾರು ವರ್ಷಗಳಿಂದ ಸೇವೆ ಮಾಡುತ್ತಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ನ್ಯಾಯಯುತ ಪ್ರತಿಭಟನೆ ಮಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂಬೇಡ್ಕರ್ ಅವರ ಸಂವಿಧಾನದಂತೆ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಅಂಬೇಡ್ಕರ್ ಅವರ ಈ ತತ್ವದಲ್ಲಿ ಶಾಂತಿಯುತವಾಗಿ, ನ್ಯಾಯಯುತವಾಗಿ ಪ್ರತಿಭಟನೆ ಮಾಡುತ್ತಿದ್ದವರನ್ನು ತಾಲೂಕಾಡಳಿತದ ಸೂಚನೆಯಂತೆ ವಶಕ್ಕೆ ಪಡೆದಿದ್ದನ್ನು WHRK ವಿಶ್ವ ಮಾನವ ಹಕ್ಕು ಸಂಸ್ಥೆಯು ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷ ಶ್ರೀಧರ್ ನಾಯ್ ಹೇಳಿದ್ರು.