ಬೈಕ್‌ಗೆ ಕಾರು ಡಿಕ್ಕಿ, ಡಿಕ್ಕಿ ರಭಸಕ್ಕೆ 5 ವರ್ಷದ ಮಗು ದಾರುಣ ಸಾ**

ಮೈಸೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬಾಲಕ ಲಿಖಿತ್ (5) ಎಂಬಾತ ದಾರುಣವಾಗಿ ಮೃತಪಟ್ಟಿದ್ದಾನೆ. ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಸಮೀಪದಲ್ಲಿ ಅಪಘಾತ ನಡೆದಿದೆ. ಬೈಕ್‌ಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗು ಕಳೆದುಕೊಂಡ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.