ಕಲಬುರಗಿ: ಉತ್ತರ ಒಳನಾಡಿನಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ಸ್ಥಳದಲ್ಲೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜೇಂದ್ರ ಪಾಟೀಲ್ (62) ಮೃತ ದುದೈವಿ.
ರಾಜೋಳ ಗ್ರಾಮದಿಂದ ಮಗಳ ಮನೆ ಕುರುಕುಂಟಾ ಗ್ರಾಮಕ್ಕೆ ತೆರಳಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಪರಿಣಾಮ ರಾಜೇಂದ್ರ ಅವರು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಕುರುಕುಂಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.