ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.
ವಿಜಯಪುರ, ಮಂಕಿ, ಶಿರಾಲಿ, ಹೊನ್ನಾವರ, ಗೋಕರ್ಣ, ಸಿದ್ದಾಪುರ, ಆಲಮಟ್ಟಿ, ಅಥಣಿಯಲ್ಲಿ ಭಾರಿ ಮಳೆಯಾಗಿದೆ. ಕುಂದಾಪುರ, ಬಸವನಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಪುತ್ತೂರು, ಕೋಟಾ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರದಲ್ಲಿ ಮಳೆಯಾಗಿದೆ.
ಕವಡಿಮಟ್ಟಿ, ಧಾರವಾಡ, ಜಯಪುರ, ಗೇರುಸೊಪ್ಪ, ಬೆಳ್ತಂಗಡಿ, ಉಪ್ಪಿನಂಗಡಿ, ಕ್ಯಾಸಲ್ರಾಕ್, ಶೋರಾಪುರ, ಸೇಡಬಾಳ, ಹಳಿಯಾಳ, ಕಳಸ, ತ್ಯಾಗರ್ತಿ, ಕಮಲಾಪುರ, ಲಕ್ಷ್ಮೇಶ್ವರ, ಸೈದಾಪುರ, ನರಗುಂದ, ಬಾಳೆಹೊನ್ನೂರು, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.