ಹೊನ್ನಾವರ: ಪಟ್ಟಣದ ಶ್ರೀದೇವಿ ಆಸ್ಪತ್ರೆಯ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಕುಮಟಾ ಮಾರ್ಗದಿಂದ ಭಟ್ಕಳ ಕಡೆ ಸಂಚರಿಸುವ ಲಾರಿ ಹೆದ್ದಾರಿ ಪಕ್ಕದಲ್ಲಿ ಪಲ್ಟಿಯಾಗಿದೆ.
ಚಾಲಕ ಹಾಗೂ ನಿರ್ವಾಹಕರು ಅದೃಷವಶಾತ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ಐ.ಆರ್. ಬಿ ರಸ್ತೆ ಅಗಲೀಕರಣ ಮಾಡುವ ಉದ್ದೇಶದಿಂದ ಹೆದ್ದಾರಿ ಪಕ್ಕ ಮಣ್ಣು ಸಮತಟ್ಟು ಮಾಡಿರುದರಿಂದ ವಾಹನವನ್ನು ರಸ್ತೆ ಅಂಚಿನಲ್ಲಿ ನಿಲ್ಲಿಸಲು ಹೋಗಿ ಈ ಅವಘಡ ಸಂಭವಿಸಿರಬಹುದೆಂದು ಊಹಿಸಲಾಗಿದೆ. ರಸ್ತೆ ಪಕ್ಕ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆ ಉಂಟಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.