ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.
ಅಡಕಿ, ಮಂಠಾಳ, ಚಿತ್ತಾಪುರ, ಕ್ಯಾಸಲ್ರಾಕ್, ಗೇರುಸೊಪ್ಪ, ಸಿದ್ದಾಪುರ, ಸೇಡಂ, ಕಲಬುರಗಿ, ಕಾರವಾರ, ಸುಳ್ಯ, ಪುತ್ತೂರು, ಶಿರಾಲಿ, ಸಿದ್ದಾಪುರ, ಅಂಕೋಲಾ, ಕುಂದಾಪುರ, ಮಂಕಿ, ಧರ್ಮಸ್ಥಳ, ಜೇವರ್ಗಿ, ಭಾಗಮಂಡಲ, ಕೋಟ, ಕಾರ್ಕಳದಲ್ಲಿ ಮಳೆಯಾಗಿದೆ.
ಬೆಳ್ತಂಗಡಿ, ಉಡುಪಿ, ಉಡುಪಿ, ಪಣಂಬೂರು, ಹೊನ್ನಾವರ, ಕದ್ರಾ, ಕುಮಟಾ, ಬನವಾಸಿ, ಬೆಳಗಾವಿ, ಕುಡತಿನಿ, ಲಿಂಗನಮಕ್ಕಿ, ವಿಜಯನಗರ, ದಾವಣಗೆರೆ, ಹಿರಿಯೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45ಕಿ.ಮೀಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಹೊನ್ನಾವರದಲ್ಲಿ 28.0ಡಿಗ್ರಿ ಸೆಲ್ಸಿಯಸ್ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.7 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪಣಂಬೂರಿನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 26.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.