ತಲೈವಾ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು..

ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಧ್ಯರಾತ್ರಿಯೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ (ಸೆ.30) ಮಧ್ಯರಾತ್ರಿ ತಲೈವಾ ರಜನಿಕಾತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಜನಿಕಾಂತ್ಗೆ ಕಾರ್ಡಿಯಾಕ್ ಕ್ಯಾಥ್ ಲ್ಯಾಬ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್‌ ಅಭಿನಯಿಸಿರುವ ವೆಟ್ಟೈಯನ್ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಜನಿಕಾಂತ್‌ಗೆ 73 ವರ್ಷ ವಯಸ್ಸು ಆಗಿದೆ. ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.