ಕೌಟುಂಬಿಕ ಕಲಹ; ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ, ಅ.01: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ 17 ತಿಂಗಳ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಯತ್ರಿ ವಾಗಮೋರೆ(26), ಮಗು ಕುಶಾಲ್ ಮೃತರು. ಕೌಟುಂಬಿಕ ಕಲಹ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗು ಹಾಗೂ ತಾಯಿ ಶವವನ್ನು ಹೊರ ತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.