ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಭಾಲ್ಕಿ, ಕಮ್ಮರಡಿ, ಗೇರುಸೊಪ್ಪ, ಬಾಳೆಹೊನ್ನೂರು, ಗೌರಿಬಿದನೂರು, ಬೀದರ್, ಶೃಂಗೇರಿ, ಹೊನ್ನಾಳಿ, ಧರ್ಮಸ್ಥಳ, ಹುಮನಾಬಾದ್, ಹೊಸಕೋಟೆ, ಜಯಪುರ, ಎನ್ಆರ್ಪುರ, ಚನ್ನಗಿರಿ, ತ್ಯಾಗರ್ತಿ, ಸಿದ್ದಾಪುರ, ಕಾರ್ಕಳ, ಕಲಘಟಗಿ, ಅಥಣಿ, ನರಗುಂದ, ಕಮಲಾಪುರ, ಖಜೂರಿ, ಕೊಪ್ಪ, ಕಳಸ, ಮೂಡಿಗೆರೆ, ಭದ್ರಾವತಿ, ಕುಶಾಲನಗರ, ತರೀಕೆರೆಯಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬುಧವಾರ ಸಂಜೆ ಮಳೆಯಾಗಿದೆ, ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.