ಪಟ್ಟಣ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಜಯಸುಧಾ ಭೋವಿ ಹಾಗೂ ಶ್ರೀಕಾಂತ್ ಸಾನು ಅವಿರೋಧ ಆಯ್ಕೆ

ಮುಂಡಗೋಡ: ಪಟ್ಟಣ ಪಂಚಾಯತ ಅಧ್ಯಕ್ಷೆಯಾಗಿ ಜಯಸುಧಾ ಭೋವಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಕಾಂತ್ ಸಾನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಟ್ಟಣ ಪಂಚಾಯತ ಈ ಹಿಂದೆ ಇದ್ದ ಅಧ್ಯಕ್ಷೆ ರೇಣುಕಾ ಹಾವೇರಿ ಹಾಗೂ ಉಪಾಧ್ಯಕ್ಷ ಮಂಜುನಾಥ ಹರಮಲಕರ ರಾಜೀನಾಮೆ ಸಲ್ಲಿಸಿದ ಹಿನ್ನೆಲೆ ತೇರವಾದ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಸಲಾಯಿತು. ಪಟ್ಟಣ ಪಂಚಾಯತ ಅಧ್ಯಕ್ಷ ಸ್ಥಾನಕ್ಕೆ ಜಯಸುಧಾ ಭೋವಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಕಾಂತ್ ಸಾನು ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣ ಪಂಚಾಯತ ಚುನಾವಣೆಯಲ್ಲಿ ತಹಶೀಲ್ದಾರ ಶಂಕರ್ ಗೌಡಿ ಚುನಾವಣಾ ಅಧಿಕಾರಿ ಕಾರ್ಯ ನಿರ್ವಹಿಸಿದರು. ಸಚಿವ ಶಿವರಾಮ ಹೆಬ್ಬಾರ್ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದಿಸಿ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ್ಳೆಯ ಆಡಳಿತ ನೀಡುವಂತೆ ತಿಳಿಸಿದರು.