ಅಪಾರ್ಟ್ಮೆಂಟ್​ವೊಂದರ ಎರಡನೇ ಮಹಡಿಯಿಂದ ಬಿದ್ದು ಯುವತಿ ಸಾ***

ಬೆಂಗಳೂರು, ಅಕ್ಟೋಬರ್​ 05: ಅಪಾರ್ಟ್ಮೆಂಟ್​ನ ಎರಡನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿ ಆರ್​ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ತಿಳಿದು ಬಂದಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ? ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.