ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಹಾವೇರಿ, ಬೆಳ್ಳೂರು, ಭದ್ರಾವತಿ, ನಾಗಮಂಗಲ, ಹಗರಿಬೊಮ್ಮನಹಳ್ಳಿ, ಯಲಬುರ್ಗಾ, ಕುಕನೂರು, ಇಳಕಲ್, ಕೂಡಲಸಂಗಮ, ಬಿಳಗಿ, ಗದಗ, ಲಕ್ಷ್ಮೇಶ್ವರ, ಬೈಲಹೊಂಗಲ, ಗುತ್ತಲ್, ಆಲಮಟ್ಟಿ, ಗೋಕಾಕ್, ಹರಪನಹಳ್ಳಿ, ಚನ್ನರಾಯಪಟ್ಟಣ, ದಾವಣಗೆರೆಯಲ್ಲಿ ಮಳೆಯಾಗಿದೆ.
ಪಣಂಬೂರು, ಅಣ್ಣಿಗೆರೆ, ಕುಂದಗೋಳ, ಹಿರೇಕೆರೂರು, ಮುನಿರಾಬಾದ್, ಹಾವೇರಿ, ಕುಷ್ಟಗಿ, ಬಾದಾಮಿ, ಯಡವಾಡ, ಕಲಬುರಗಿ, ಚಾಮರಾಜನಗರ, ಶ್ರವಣಬೆಳಗೊಳ, ತಿಪಟೂರು, ಹೊಸದುರ್ಗ, ಕೃಷ್ಣರಾಜಪೇಟೆ, ಹೊನ್ನಾಳಿ, ಬೇಲೂರು, ತರೀಕೆರೆಯಲ್ಲಿ ಮಳೆಯಾಗಿದೆ.
ಹಳಿಯಾಳ, ಕಾರ್ಕಳ, ಮಂಗಳೂರು, ಸೇಡಬಾಳ, ಶ್ರೀರಂಗಪಟ್ಟಣ, ನಂಜನಗೂಡು, ಬೇಗೂರು, ಯುಗಟಿ, ಮೈಸೂರು, ಸರಗೂರು, ಕಿರವತ್ತಿ, ಧಾರವಾಡ, ಕೆಆರ್ನಗರ, ಯಲ್ಲಾಪುರ, ಧರ್ಮಸ್ಥಳ, ಕಲಘಟಗಿ, ಶಿರಹಟ್ಟಿ, ವಿಜಯಪುರ, ಚಿಕ್ಕೋಡಿ, ಸೇಡಂ, ನಿಪ್ಪಾಣಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.