ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಆನೇಕಲ್: ಮಗನಿಂದಲೇ ತಂದೆಯ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ವೇಲಾಯುದನ್ (76) ಕೊಲೆಯಾದವರು. ವಿನೋದ್ ಕುಮಾರ್ ಕೊಲೆ ಆರೋಪಿ ಆಗಿದ್ದಾನೆ. ಮೂಲತಃ ಕೇರಳ ಮೂಲದ ಏರಿಮಲೆ ಮೂಲದವರು.

ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಮನೆಯಲ್ಲಿದ್ದ ಚಾಕು ತೆಗೆದುಕೊಂಡು ತಂದೆಗೆ ಇರಿದಿದ್ದಾನೆ. ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿ ವೇಲಾಯುದನ್ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು, ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಆರೋಪಿ ವಿನೋದ್‌ನನ್ನು ಬನ್ನೇರುಘಟ್ಟ ಪೊಲೀಸರು ವಶಕ್ಕೆ ಪಡೆದಿದ್ದಾರೆ.