ಬೆಂಗಳೂರು: ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಮಹಿಳೆ. ಬಿಎಂಟಿಸಿ ಬಸ್ನಲ್ಲಿ ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಕಳ್ಳಿ, ಪರಿಚಯ ಮಾಡಿಕೊಂಡು ಜ್ಯೂಸ್ ಕುಡಿಯಲು ಕರೆದುಕೊಂಡು ಹೋಗ್ತಿದ್ದಳು. ಜ್ಯೂಸ್ ಕುಡಿದು ಪ್ರಜ್ಞೆ ಕಳೆದುಕೊಂಡ ತಕ್ಷಣ ಮೊಬೈಲ್, ಪರ್ಸ್, ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದಳು.
ಈ ಬಗ್ಗೆ ಮಾಹಿತಿ ಪಡೆದ ಬ್ಯಾಟರಾಯನಪುರ ಪೊಲೀಸರು ಆಕೆಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಠಾಣೆಗೆ ಕರೆತಂದ ಕೆಲವೇ ನಿಮಿಷಗಳಲ್ಲಿ ಮಹಿಳೆ ವಿಷಪೂರಿತ ಚಾಕಲೆಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಹಿಳೆ ಕುಸಿದುಬಿದ್ದ ನಂತರ ಪೊಲೀಸರು ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.