ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಕೆಲಸ ಕೊಡಿಸಿದ ಕುಮಾರಸ್ವಾಮಿ

ಉತ್ತರ ಕನ್ನಡ, ಅ.19: ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್​ ಮಾಲೀಕ ಜಗನಾಥ್​ ಅವರ ಪುತ್ರಿ ಎನ್.​ ಕೃತಿ ಅವರಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬಿಹೆಚ್​ಇಎಲ್​​ನಲ್ಲಿ ಉದ್ಯೋಗ ಕಲ್ಪಿಸಿದ್ದಾರೆ. ಮಂಡ್ಯದ ಸರ್​ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ನೇಮಕಾತಿ ಪತ್ರ ನೀಡಿದರು.

ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್​ಇಎಲ್​ನಲ್ಲಿ ಉದ್ಯೋಗ ಕೊಡಿಸುವುದಾಗಿ ಈ ಹಿಂದೆ ಹೆಚ್​ಡಿ ಕುಮಾರಸ್ವಾಮಿ ಅವರು ಎನ್​. ಕೃತಿ ಅವರಿಗೆ ದೂರವಾಣಿ ಕರೆ ಮಾಡಿ ಹೇಳಿದ್ದರು. ಕೊಟ್ಟ ಮಾತಿನಂತೆ ಹೆಚ್​ಡಿ ಕುಮಾರಸ್ವಾಮಿ ಅವರು ಕೃತಿಕಾಗೆ ಕೆಲಸ ಕೊಡಿಸಿದ್ದಾರೆ.