ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯ ಅಬ್ಬರ ಜೋರಾಗಿದೆ, ಈಗ 7 ಗಂಟೆಯ ಮೇಲೆ ಸ್ವಲ್ಪ ಬಿಡುವು ಕೊಟ್ಟಿದೆ. ಆದರೆ ಅಕ್ಟೋಬರ್ 26ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ನಗರ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ನಾಗಮಂಗಲ, ನಾಯಕನಹಟ್ಟಿ, ಬರಗೂರು, ನಾರಾಯಣಪುರ, ಕವಡಿಮಟ್ಟಿ, ಕಕ್ಕೇರಿ, ಹೆಸರಘಟ್ಟ, ಬೆಳ್ಳೂರು, ಕೆಂಭಾವಿ, ಚಿತ್ರದುರ್ಗ, ಬೇಲೂರು, ಕೃಷ್ಣರಾಜಪೇಟೆ, ಹುಣಸಗಿ, ರೋಣ, ರಾಯಚೂರು, ಮುರಗೋಡು, ಯಡವಾಡ, ಗುಬ್ಬಿ, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಮಾಗಡಿ, ಪರಶುರಾಂಪುರ, ಶಾಹಪುರ, ಸೇಡಂ, ಶೋರಾಪುರ, ಬಾದಾಮಿ, ಯಲಬುರ್ಗಾದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯಲ್ಲಿ ಗಾಳಿಯು ಗಂಟೆಗೆ 35 ಕಿ.ಮೀನಿಂದ 45 ಕಿ.ಮೀ ವೇಗದಲ್ಲಿ ಚಲಿಸಲಿದೆ. ಹೊನ್ನಾವರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.