ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿದ ಗಂಡನಿಗೆ ಜೀವಾವಧಿ ಶಿಕ್ಷೆ

ಹಳಿಯಾಳ: ತಾಲೂಕಿನ ಯಡೋಗ ಗ್ರಾಮದ ರಾಜಕುಮಾರ ಕುಂದರಕೇರ್ ಈತ ಹೆಂಡತಿಯ ಶೀಲ ಶಂಕಿಸಿ ಅವಳ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿದ್ದ. ಈತನಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರಾದ ಕಿರಣ ಕಿಣಿ ಇವರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ದಿನಾಂಕ 10-02-2022ರಂದು ಹಳಿಯಾಳ ಪೋಲಿಸ್ ಠಾಣೆ ವ್ಯಾಪ್ತಿಯ ಯಡೋಗಾ ಗ್ರಾಮದಲ್ಲಿ ನಡೆದ ಘಟನೆ ನಡೆದಿತ್ತು ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಎಂ.ಮಳಗಿಕರ್ ರವರು ನ್ಯಾಯಾಲಯದ ಪ್ರಕರಣ ವಿದ್ಯಮಾನಗಳನ್ನು ಮತ್ತು ಲಭ್ಯವಿದ್ದ ಸಾಕ್ಷಿದಾರರನ್ನು ಸಾಕ್ಷ್ಯವನ್ನು ಗಂಭೀರವಾಗಿ ತೆಗೆದುಕೊಂಡು ಅರೋಪಿತರಿಗೆ ಶಿಕ್ಷೆ ವಿಧಿಸಬೇಕೆಂದು ತಮ್ಮ ಸುದೀರ್ಘ ವಾದ ಮಂಡಿಸಿದರು.

ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ, 25 ಸಾವಿರ ರೂ ದಂಡ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಮೃತಳ ಅವಲಂಭಿತರ ಮಕ್ಕಳಿಗೆ ಪರಿಹಾರ ರೂಪದಲ್ಲಿ ನೀಡಬೇಕೆಂದು ಆದೇಶ ಹೊರಡಿಸಲಾಗಿದೆ.